ಬೆಂಗಳೂರು: ಮಹಿಳಾ ಅಧಿಕಾರಿಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಜಾಮೀನು ನೀಡುವಂತೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಚಿಂತಾಮಣಿ ಕೋರ್ಟ್ನಲ್ಲಿ ಸಲ್ಲಿಸಿದ್ದ ಅರ್ಜಿ ವಿಚರಣೆ ನಡೆಸಿದ ನ್ಯಾಯಾಧೀಶರು ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಧಮ್ಕಿ ಹಾಕಿದ ಪ್ರಕರಣದಲ್ಲಿ ಅವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ.
ಎಫ್ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಜಾಮೀನು ನೀಡುವಂತೆ ಕೋರಿ ಚಿಂತಾಮಣಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಆದರೆ, ನ್ಯಾಯಾಲಯ ರಾಜೀವ್ ಅವರ ಮನವಿಯನ್ನು ತಿರಸ್ಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಚಿಂತಾಮಣಿಯ ೨ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿತ್ತು. ನ್ಯಾಯಾಧೀಶರಾದ ಕಾಂತರಾಜು ಅವರು ವಿಚಾರಣೆ ನಡೆಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಆದೇಶ ಕೋರ್ಟ್ ಆವರಣದಲ್ಲಿ ಕಾದು ಕುಂತಿದ್ದ ರಾಜೀವ್ ಗೌಡ ಬೆಂಬಲಿಗರಿಗೆ ನಿರಾಸೆ ಮೂಡಿಸಿತು.
Updating…

