ನಡುರಾತ್ರಿ ಬೈಕ್‌ನಲ್ಲಿ ಯುವತಿಗೆ ಕಿರುಕುಳ: ಮೂವರು ಆರೋಪಿಗಳ ಬಂಧನ
ಬೆಂಗಳೂರು:ನಡುರಾತ್ರಿ ಬೈಕ್‌ನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಸುದ್ದುಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.
ಡಿ.25ರಂದು ಸಿಲ್ಕ್ ಬೋರ್ಡ್ ರಸ್ತೆಯಲ್ಲಿ ಮೂವರು ಆರೋಪಿಗಳು ಬೈಕ್‌ನಲ್ಲಿ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ, ಅಡ್ಡಗಟ್ಟಿ ಕಿರುಕುಳ ನೀಡಿದ್ದರು. ಈ ದೃಶ್ಯವನ್ನು ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿ ಸೆರೆಹಿಡಿದ್ದಿದ್ದರು. ಆ ವಿಡಿಯೋವನ್ನು ಪೊಲೀಸರಿಗೆ ಟ್ಯಾಗ್ ಮಾಡಿದ್ದರು.
ವಿಡಿಯೋ ಆಧರಿಸಿ, ಪ್ರಕರಣ ದಾಖಲಿಸಿಕೊಂಡಿದ್ದ ಸುದ್ದುಗುಂಟೆ ಪಾಳ್ಯ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ರೋಷನ್, ಆರ್ಯನ್ ಹಾಗೂ ಮತ್ತೋರ್ವ ಅಪ್ರಾಪ್ತ ಎಂದು ಹೇಳಲಾಗಿದೆ.


