ಬೆಂಗಳೂರು: ಕೊಲೆ ಆರೋಪದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಪತ್ನಿಗೆ ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸಾಮಾಜಿಕ ಜಾಲತಾಣದಲ್ಲಿ ತಮಗೆ ಆಗುತ್ತಿರುವ ಕಿರುಕುಳದ ಕುರಿತು ವಿಜಯಲಕ್ಷ್ಮಿ ಅವರು ಡಿ.24 ರಂದು ದೂರು ನೀಡಿದ್ದರು. ಈ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸಿಸಿಬಿ ಕ್ರೈಂ ವಿಭಾಗದ ಪೊಲೀಸರ ತನಿಖೆಯಲ್ಲಿ ಇಬ್ಬರು ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಚಿಕ್ಕಬಾಣವಾರದ ಒಬ್ಬ ಆರೋಪಿ ಹಾಗೂ ದಾವಣಗೆರೆಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಯಾವುದೇ ಮಹಿಳೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಹಾಕಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

