ಬಳ್ಳಾರಿ: ಸ್ಟೀಲ್ ಮೆಟಿರೀಯಲ್ ತಂಪಾಗಿಸುವ ನೀರಿನ ಹೊಂಡಕ್ಕೆ ಬಿದ್ದು, ಮೂವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬಳ್ಳಾರಿಯ ಜಿಂದಾಲ್ ಕಾರ್ಖಾನೆಯಲ್ಲಿ ನಡೆದಿದೆ.
ಭುವನಹಳ್ಳಿ ಮೂಲದ ಜೆಡೆಪ್ಪ, ಬೆಂಗಳೂರಿನ ಸುಶಾಂತ್, ಚೆನ್ನೈ ಮೂಲದ ಮಹಾದೇವನ್ ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಪೈಪಲೈನ್ ಚೆಕ್ ಮಾಡುತ್ತಿದ್ದ ವೇಳೆ ಮೂವರು ಆಯತಪ್ಪಿ ನೀರಿನ ರಭಸಕ್ಕೆ ಸಿಲುಕಿಕೊಂಡು ಹೊಂಡಕ್ಕೆ ಬಿದ್ದಿದ್ದಾರೆ.
ಆಳವಾದ ಹೊಂಡದಲ್ಲಿ ಬಿದ್ದ ಪರಿಣಾಮ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಜಿಂದಾಲ್ ಸಂಜೀವಿನಿ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ತೋರಣಗಲ್ಲು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಾಗಿದೆ. ಘಟನೆಗೆ ನಿಖರವಾದ ಕಾರಣ ಏನು ಎಂಬುದರ ಬಗ್ಗೆ ಪೊಲೀಸರಿಂದ ತನಿಖೆ ನಡೆಯುತ್ತಿದೆ.