ಬೆಂಗಳೂರು: “ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.
ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಐಪಿಎಲ್ ಫೈನಲ್ ಪಂದ್ಯವನ್ನು ಅಹಮದಾಬಾದಿಗೆ ಸ್ಥಳಾಂತರಿಸಲಾಗಿದೆ ಎಂಬ ವಿಚಾರವಾಗಿ ಕೇಳಿದಾಗ, “ಬೇರೆ ಕಡೆ ಶೇ 50 ರಷ್ಟು ಮೀಸಲಿರುತ್ತದೆ” ಎಂದರು.
ಬಿಸಿಸಿಐ ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಹೇಳಿಕೆ ನೀಡಿರುವ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ” ಎಂದರು.

