ಬೆಂಗಳೂರು:
ದೇಶದ 543 ಲೋಕಸಭಾ ಕ್ಷೇತ್ರಗಳ ಪೈಕಿ 102 ಕ್ಷೇತ್ರಗಳಿಗೆ ಮೊದಲ ಹಂತದ ಲೋಕಸಭಾ ಚುನಾವಣೆಗೆ ಮತದಾನ ಇಂದು ಶುಕ್ರವಾರ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಿ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ನಿತಿನ್ ಗಡ್ಕರಿ ಸೇರಿದಂತೆ 8 ಮಂದಿ ಕೇಂದ್ರ ಸಚಿವರ ಭವಿಷ್ಯವನ್ನು ಮತದಾರರು ನಿರ್ಧರಿಸಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಇದೆ.
2019ರ ಫಲಿತಾಂಶ ಹೀಗಿತ್ತು…
2019 ರ ಲೋಕಸಭೆ ಚುನಾವಣೆಯಲ್ಲಿ, ಈ 102 ಕ್ಷೇತ್ರಗಳಲ್ಲಿ ಬಿಜೆಪಿ 60 ಕ್ಷೇತ್ರ ಮತ್ತು ಕಾಂಗ್ರೆಸ್ 65 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದವು. ಇದಲ್ಲದೇ 24 ಕ್ಷೇತ್ರಗಳಲ್ಲಿ ಡಿಎಂಕೆ ಸ್ಪರ್ಧಿಸಿತ್ತು. ಕಳೆದ ಚುನಾವಣೆಯಲ್ಲಿ ಬಿಜೆಪಿ 40, ಕಾಂಗ್ರೆಸ್ 15 ಮತ್ತು ಡಿಎಂಕೆ 24 ಕ್ಷೇತ್ರಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದವು. ಇದಲ್ಲದೇ ಬಿಎಸ್‌ಪಿ 3 ಮತ್ತು ಎಸ್‌ಪಿ 2 ಸ್ಥಾನಗಳನ್ನು ಗೆದ್ದುಕೊಂಡಿದ್ದವು. 18 ಸ್ಥಾನಗಳನ್ನು ಇತರೆ ಪಕ್ಷಗಳು ಗೆದ್ದಿದ್ದವು. ಈ ಮೂಲಕ 102 ಕ್ಷೇತ್ರಗಳ ಪೈಕಿ ಯುಪಿಎ 45 ಮತ್ತು ಎನ್ ಡಿಎ 41 ಸ್ಥಾನಗಳನ್ನು ಗೆದ್ದುಕೊಂಡಿದ್ದವು.
ಯಾವ ಪಕ್ಷದಿಂದ ಎಷ್ಟು ಮಂದಿ ಅಭ್ಯರ್ಥಿಗಳು?
ಬಿಎಸ್‌ಪಿಯಿಂದ 86, ಬಿಜೆಪಿಯಿಂದ 77, ಕಾಂಗ್ರೆಸ್‌ನಿಂದ 56, ಎಐಎಡಿಎಂಕೆಯಿಂದ 36, ಡಿಎಂಕೆಯಿಂದ 5, ಆರ್‌ಜೆಡಿಯಿಂದ 4, ಎಸ್‌ಪಿಯಿಂದ 7, ಆರ್‌ಎಲ್‌ಡಿಯಿಂದ 1, ಎಲ್‌ಜೆಪಿ (ಆರ್) ಮತ್ತು ಜಿತನ್ ರಾಮ್ ಮಾಂಝಿ ಅವರ ಪಕ್ಷದ 1 ಅಭ್ಯರ್ಥಿಯು ಅದೃಷ್ಟವನ್ನು ಪರೀಕ್ಷಿಸುತ್ತಿದ್ದಾರೆ.
1625 ಅಭ್ಯರ್ಥಿಗಳು ಕಣದಲ್ಲಿ
ಮೊದಲ ಹಂತದ ಮತದಾನದಲ್ಲಿ 102 ಸ್ಥಾನಗಳಲ್ಲಿ 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅದರಲ್ಲಿ 134 ಮಹಿಳಾ ಅಭ್ಯರ್ಥಿಗಳು ಮತ್ತು 1491 ಪುರುಷ ಅಭ್ಯರ್ಥಿಗಳಾಗಿದ್ದಾರೆ.
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು (ಏಪ್ರಿಲ್ 19) ನಡೆಯುತ್ತಿದೆ. 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 1625 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 9 ಲೋಕಸಭಾ ಸ್ಥಾನಗಳನ್ನು ಹೊಂದಿರುವ ಈಶಾನ್ಯದ ಆರು ರಾಜ್ಯಗಳು, ತಮಿಳುನಾಡಿನ ಎಲ್ಲಾ 39 ಕ್ಷೇತ್ರಗಳು, ಲಕ್ಷದ್ವೀಪದ 1 ಕ್ಷೇತ್ರ, ಅರುಣಾಚಲ ಪ್ರದೇಶದ 2, ಬಿಹಾರದ 4, ಅಸ್ಸಾಂನ 4, ಛತ್ತೀಸ್‌ಗದ 1, ಮಧ್ಯಪ್ರದೇಶದ 6, ಮಹಾರಾಷ್ಟ್ರದ 5, ಮಣಿಪುರದ 2, ಮೇಘಾಲಯದ 2, ಮಿಜೋರಾಂದ 1, ನಾಗಾಲ್ಯಾಂಡ್‌ನ 1, ರಾಜಸ್ಥಾನದ 12, ಸಿಕ್ಕಿಂನ 1, ತ್ರಿಪುರಾದ 1, ಉತ್ತರ ಪ್ರದೇಶದ 8, ಉತ್ತರಾಖಂಡದ 5, ಪಶ್ಚಿಮ ಬಂಗಾಳದ 3, ತಮಿಳುನಾಡಿನ 39, ಅಂಡಮಾನ್ ಮತ್ತು ನಿಕೋಬಾರ್‌ನ 1, ಜಮ್ಮು ಮತ್ತು ಕಾಶ್ಮೀರದ 1, ಲಕ್ಷದ್ವೀಪದ 1 ಮತ್ತು ಪುದುಚೇರಿಯ 1 ಲೋಕಸಭಾ ಕ್ಷೇತ್ರಕ್ಕೆ ಮತದಾನ ನಡೆಯುತ್ತಿದೆ.