ದೇವನಹಳ್ಳಿ: ಬಿಜೆಪಿಯವರು ಸುಳ್ಳು ಹೇಳಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ದೇಶದ ಸ್ಥಿತಿ ಸುಧಾರಿಸಲು ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಈಗ ನಡೆಯುತ್ತಿರುವ ಲೋಕಸಭಾ ಚುನಾವಣೆಯು ಧರ್ಮ ಮತ್ತು ಅಧರ್ಮದ ನಡುವೆ ನಡೆಯುತ್ತಿರುವ ಸಮರವಾಗಿದೆ ಬಿಜೆಪಿಯವರು ಮತ್ತೆ ಅಧಿಕಾರಕ್ಕೆ ಬಂದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನವನ್ನು ಬದಲಾಯಿಸುವ ಹುನ್ನಾರ ಹೊಂದಿದ್ದಾರೆ ಯಾರಾದರೂ ಸಂವಿಧಾನವನ್ನು ಬದಲಿಸಲು ಯತ್ನಿಸಿದರೆ ರಕ್ತಪಾತ ನಡೆಯಲಿದೆ ಬಿಜೆಪಿ ಈ ದೇಶದ ಬಡವರು ಹಿಂದುಳಿದ ವರ್ಗಗಳು ಮತ್ತು ಧಾರ್ಮಿಕ ಅಲ್ಪಸಂಖ್ಯಾತರಿಗೆ ಮಾರಕವಾಗಿದ್ದಾರೆ ಅವರನ್ನು ಅಧಿಕಾರದಿಂದ ಕಿತ್ತೊಗೆದು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಮಾಜಿ ಶಾಸಕ ಮುನಿ ನರಸಿಂಹಯ್ಯ ಹೇಳಿದ್ದಾರೆ.
ದೇವನಹಳ್ಳಿ ತಾಲ್ಲೂಕಿನ ಬೂದಿಗೆರೆ ಸಮೀಪದ ಹಂದರಹಳ್ಳಿಯಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದ ಕಾಂಗ್ರೆಸ್ ಸರ್ಕಾರ ಕಳೆದ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿಗಳನ್ನು ಜಾರಿ ಮಾಡುವ ಮೂಲಕ ನುಡಿದಂತೆ ನಡೆದುಕೊಂಡಿದೆ ರಾಜ್ಯದಲ್ಲಿನ ಬಡ ಕುಟುಂಬಗಳಿಗೆ ಇದರಿಂದಾಗಿ ಅನುಕೂಲವಾಗಿದೆ, ಈಗ ಲೋಕಸಭಾ ಚುನಾವಣೆ ನಡೆಯುತ್ತಿದೆ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಯಂತೆ ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಉದ್ಯೋಗ ಖಾತ್ರಿ ಯೋಜನೆಗೆ 400 ರೂ ಕನಿಷ್ಠ ವೇತನ, ರೈತರಿಗೆ ಕಾನೂನು ಬದ್ದ ಬೆಂಬಲ ಬೆಲೆ, ಯುವಕರಿಗೆ ವರ್ಷಕ್ಕೆ 1 ಲಕ್ಷ ಶಿಷ್ಯ ವೇತನ, ಕುಟುಂಬಕ್ಕೆ 25 ಲಕ್ಷ ಆರೋಗ್ಯ ವಿಮೆ ಮತ್ತು ಮಹಿಳೆಯರಿಗೆ ವರ್ಷಕ್ಕೆ 1ಲಕ್ಷ ಸಹಾಯಧನ ನೀಡುವ ಮೂಲಕ ಕೇಂದ್ರ ಸರ್ಕಾರದಿಂದಲೂ ಐದು ಗ್ಯಾರಂಟಿ ಯೋಜನೆಗಳನ್ನು ಜನರಿಗೆ ನೀಡಲಿದೆ, ಈಗಿನ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ನೀತಿಯಿಂದಾಗಿ ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗ ಹೆಚ್ಚಾಗಿದೆ ಅರ್ಥಿಕ ವ್ಯವಸ್ಥೆ ಕುಸಿದಿದೆ ಕಾರ್ಪೊರೇಟ್ ಸಂಸ್ಥೆಗಳ ಪರವಾಗಿ ಕೆಲಸ ಮಾಡುವ ಮೋದಿ ಸರ್ಕಾರದಿಂದ ದೇಶಕ್ಕೆ ಹೆಚ್ಚಿನ ಹಾನಿ ಉಂಟಾಗಿದೆ ಇದನ್ನು ಸರಿಪಡಿಸಲು ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರನ್ನು ಸಂಸತ್ತಿಗೆ ಕಳಿಸಬೇಕು ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಪಕ್ಷದ ಕಾರ್ಯಕರ್ತರು ರಾಜ್ಯ ಸರ್ಕಾರದ ಜನಪರ ಯೋಜನೆಗಳನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಮೈತ್ರಿ ಪಕ್ಷಗಳಿಗೆ ತಕ್ಕ ಪಾಠ ಕಲಿಸಲು ಸಮರ್ಥವಾಗಿ ಕೆಲಸ ಮಾಡಬೇಕು ಎಂದು ಮಾಜಿ ಶಾಸಕರು ತಿಳಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಭೈರೇಗೌಡ ಮಾತನಾಡಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ ಕೆ ಸುಧಾಕರ್ ಕೋವಿಡ್ ಮಹಾಮಾರಿ ವ್ಯಾಪಿಸಿ ಜನರು ಸಾವು ಬದುಕಿನಲ್ಲಿ ಹೋರಾಟ ನಡೆಸುತ್ತಿದ್ದಾಗ ಜನರು ಪ್ರಾಣ ಉಳಿಸಿಕೊಳ್ಳಲು ಆಕ್ಸಿಜನ್ ಗೆ ಪರದಾಡುತ್ತಿದ್ದಾಗ ಕೋವಿಡ್ ನಿರ್ವಹಣೆಗಾಗಿ ಔಷಧಿ ಹಾಗೂ ಉಪಕರಣಗಳ ಖರೀದಿಸಿರುವುದರಲ್ಲಿ ಬಾರಿ ಭ್ರಷ್ಟಾಚಾರ ಮಾಡಿ ಜನರ ಹೆಣಗಳಲ್ಲಿ ಹಣಮಾಡಿದ್ದಾರೆ ಬಡವರ ಶಾಪದಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆ ಯಲ್ಲಿ ಅವರು ಗೆಲ್ಲುವುದಿಲ್ಲ ಜನ ತಕ್ಕ ಪಾಠ ಕಲಿಸುತ್ತಾರೆ. ಚುನಾವಣೆ ಮುಗಿಯುತಿದ್ದಂತೆ ತಾಲ್ಲೂಕಿನ ಪ್ರತಿ ಗ್ರಾಮಕ್ಕೆ 17 ಲಕ್ಷ ರೂ ನಂತೆ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಸಚಿವರು ಚಾಲನೆ ನೀಡಲಿದ್ದಾರೆ. ಈ ಹಿಂದೆ ಜೆಡಿಎಸ್ ಶಾಸಕರು ಗ್ರಾಮೀಣ ಭಾಗದಲ್ಲಿ ಅಪೂರ್ಣ ಮತ್ತು ಕಳಪೆ ಕಾಮಗಾರಿಗಳನ್ನು ಮಾಡಿದ್ದರು. ಅವರ ಅವದಿಯಲ್ಲಿ ನಡೆದ ಕಾಂಕ್ರೀಟ್ ರಸ್ತೆ ವರ್ಷ ಕಳೆಯುವ ಮುನ್ನವೇ ಕಿತ್ತು ಹೋಗಿತ್ತು ಜಿಲ್ಲೆಯ ಸಚಿವರಾದ ಕೆಎಚ್ ಮುನಿಯಪ್ಪ ಅವರು ಗುಣಮಟ್ಟದ ಕಾಂಕ್ರೀಟ್ ರಸ್ತೆಗಳ ಅಭಿವೃದ್ಧಿ ಗಾಗಿ 100 ಕೋಟಿ ರೂ ಕ್ರೀಯಾಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಕೇಂದ್ರದಲ್ಲಿ ಇಂಡಿಯಾ ನೇತೃತ್ವದ ಸರ್ಕಾರ ಜಾರಿಗೆ ಬಂದರೆ ನಮ್ಮ ರಾಜ್ಯ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ. ಬಡವರ ತೆರಿಗೆಯನ್ನು ಬಡವರ ಅನುಕೂಲಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದರೆ ವಿರೋಧ ಪಕ್ಷದವರು ಬಿಟ್ಟಿಭಾಗ್ಯ ಹೆಣ್ಣು ಮಕ್ಕಳು ದಾರಿ ತಪ್ಪಿದ್ದಾರೆ ಎಂದೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ ಮತದಾರರಿಗೆ ಯಾವುದು ಸತ್ಯ ಯಾವುದು ಸುಳ್ಳು ಎಂಬುದರ ಬಗ್ಗೆ ಅರಿವಿದೆ, ಎಂದರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಲಕ್ಷ್ಮೀನಾರಾ ಯಣಪ್ಪ, ಖಾದಿ ಬೋರ್ಡ್ ಮಾಜಿ ಅಧ್ಯಕ್ಷ ಲಕ್ಷ್ಮಣಮೂರ್ತಿ, ಮುಖಂಡರಾದ ಲಕ್ಷ್ಮಣ್ ಗೌಡ, ಹಂದರಹಳ್ಳಿ ರಮೇಶ್, ಪುರುಷೋತ್ತಮ್, ಶಂಕರ್, ನಜೀರ್ ಅಹಮದ್, ಬಚ್ಚೇಗೌಡ, ಗಜೇಂದ್ರಪ್ಪ, ಮುನಿಯಪ್ಪ, ಮಂಜುನಾಥ್ ಸೇರಿದಂತೆ ಪಕ್ಷದ ಅನೇಕ ಮುಖಂಡರುಗಳು ಹಾಜರಿದ್ದರು.