ಸುದ್ದಿ

ಶಿವಾಜಿನಗರದಲ್ಲಿ ಪುಟ್‌ಪಾತ್ ತೆರವಿಗೆ ತೆರಳಿದ್ದ ಅಧಿಕಾರಿಗಳ ಮೇಲೆ ವ್ಯಾಪಾರಿಗಳ ಹಲ್ಲೆ

Share It

ಬೆಂಗಳೂರು: ಪುಟ್ ಪಾತ್ ತೆರವಿಗೆ ತೆರಳಿದ್ದ ಜಿಬಿಎ ಅಧಿಕಾರಿಗಳಿಗೆ ವ್ಯಾಪಾರಿಗಳು ಏಕಾಏಕಿ ದಾಳಿ ನಡೆಸಿ, ಹಲ್ಲೆ ಮಾಡಿರುವ ಘಟನೆ ಶಿವಾಜಿನಗರದಲ್ಲಿ ನಡೆದಿದೆ.

ಬೆಂಗಳೂರು ನಗರದಲ್ಲಿ ಒತ್ತುವರಿ ತೆರವು ಮಾಡುತ್ತಿದ್ದು, ಇದರ ಅಂಗವಾಗಿ ಶಿವಾಜಿನಗರದ ಬಸ್ ನಿಲ್ದಾಣದ ಬಳಿ ತೆರವು ಕಾರ್ಯ ನಡೆಸುವ ಸಂದರ್ಭದಲ್ಲಿ ಘಟನೆ ನಡೆದಿದೆ.

ಜೆಸಿಬಿ ಚಾಲಕ, ಅಸಿಸ್ಟೆಂಟ್ ಎಂಜಿನಿಯರ್ ಹಾಗೂ ಇತರೆ ಸಿಬ್ಬಂದಿಯ ಮೇಲೆ ಪೆಪ್ಪರ್ ಸ್ಪ್ರೇ ಎಸೆದು ಹಲ್ಲೆ ನಡೆಸಿದ್ದಾರೆ. ವಿವಿಧ ಸಂಘಟನೆಯ ಮುಖಂಡರು ಮತ್ತು ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ಬಿಬಿಎಂಪಿ ಸಿಬ್ಬಂದಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸೂಕ್ತ ಕ್ರಮವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ನಡುವೆ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.


Share It

You cannot copy content of this page