ರಾಂಚಿ: ದೇಶದಲ್ಲಿ ರೈಲು ಅಪಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಜಾರ್ಖಂಡ್ ರಾಜ್ಯದ ಚಕ್ರಧರ್ ಪುರದ ಬಳಿ ಗೂಡ್ಸ್ ರೈಲು ಮತ್ತು ಪ್ಯಾಸೆಂಜರ್ ಎಕ್ಸಪ್ರೆಸ್ ರೈಲು ಅಪಘಾತಕ್ಕೀಡಾಗಿವೆ.
ಚಕ್ರಧರ್ ಪುರ ರೈಲು ನಿಲ್ದಾಣದ ಬಳಿ ಗೂಡ್ಸ್ ರೈಲೊಂದು ಹಳಿ ತಪ್ಪಿತ್ತು. ಈ ವೇಳೇ ಗೂಡ್ಸ್ ರೈಲಿನ ಬೋಗಿಗಳು ಪಕ್ಕದ ಹಳಿಯ ಮೇಲೆ ಬಿದ್ದಿದ್ದವು. ಇದೇ ವೇಳೆ ಆಗಮಿಸಿದ ಹೌರಾ- ಮುಂಬೈ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿನ ಬೋಗಿಗಳಿಗೆ ಗುದ್ದಿ ಅಪಘಾತ ಸಂಭವಿಸಿದೆ.
ಅಪಘಾತ ನಡೆದ ರಭಸಕ್ಕೆ ಹೌರಾ ಎಕ್ಸ್‌ಪ್ರೆಸ್ ರೈಲಿನ ಅನೇಕ ಬೋಗಿಗಳು ಹಳಿ ತಪ್ಪಿದ್ದು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 60 ಜನರಿಗೆ ಗಂಭೀರ ಗಾಯಗಳಾಗಿವೆ. ಇನ್ನುಳಿದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
