ತುಮಕೂರು: 2024ರ ಮುಂಗಾರು ಹಂಗಾಮಿನಲ್ಲಿ ರೈತರು ಸ್ವತಃ “ರೈತರ ಬೆಳೆ ಸಮೀಕ್ಷೆ ಆಪ್” ಬಳಸಿ ತಮ್ಮ ಜಮೀನಿನ ಬೆಳೆ ವಿವರ ದಾಖಲಿಸುವ ಬಗ್ಗೆ ಮತ್ತು ಬೆಳೆ ವಿಮೆ ನೋಂದಣಿ ಮಾಡಿಸುವ ಕುರಿತು ಜೂನ್ 24ರಿಂದ 29ರವರೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳಲ್ಲಿ ಪ್ರತಿ ದಿನ ಹೋಬಳಿಗೆ 2 ರಿಂದ 3ತರಬೇತಿಯನ್ನು ಏರ್ಪಡಿಸಲಾಗಿದೆ.
ಗ್ರಾಮ ಪಂಚಾಯತಿ ಮಟ್ಟದಲ್ಲಿ ಏರ್ಪಡಿಸುವ ತರಬೇತಿಗಳಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬೇಕೆಂದು
ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
