ಉಪಯುಕ್ತ ಸುದ್ದಿ

ನಾಳೆ ಸಾರಿಗೆ ನೌಕರರ ಪ್ರತಿಭಟನೆ : ಬಸ್ ರಸ್ತೆಗಿಳಿಯೋದೆ ಡೌಟು !?

Share It

ಬೆಂಗಳೂರು: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳ ನೌಕರರು ಪ್ರತಿಭಟನೆಗೆ ಸಜ್ಜಾಗಿದ್ದು, ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಈಗಾಗಲೇ ಸರಕಾರ ನೌಕರರಿಗೆ ಎಚ್ಚರಿಕೆ ನೀಡಿದ್ದು, ಪ್ರತಿಭಟನೆಯಲ್ಲಿ ನಿರತರಾಗಿ ಕರ್ತವ್ಯಕ್ಕೆ ಹಾಜರಾಗುವವರಿಗೆ ವೇತನ ನೀಡುವುದಿಲ್ಲ ಎಂದು ಹೇಳಿದೆ. ಈ ನಡುವೆಯೂ ಕೆಲವು ಸಂಘಟನೆಗಳು ಪ್ರತಿಭಟನೆ ನಡೆಸಲು ಮುಂದಾಗಿದ್ದು, ಸರಕಾರದ ಎಚ್ಚರಿಕೆಗೆ ಹೆಚ್ಚು ಗಮನ ನೀಡಿಲ್ಲ ಎನ್ನಬಹುದು.

ಪ್ರತಿಭಟನೆಗೆ ಬೆಂಬಲ ಸೂಚಿಸುವಂತೆ ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಕರಪತ್ರವನ್ನು ಹಂಚಿ ಮನವಿ ಮಾಡಿಕೊಳ್ಳಲಾಗಿದ್ದು, ಈ ನಡುವೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.


Share It

You cannot copy content of this page