ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧದ ಆರೋಪಪಟ್ಟಿಯನ್ನು ಕೈಬಿಡುವಂತೆ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಹೊಳೇನರಸೀಪುರ ಪೊಲೀಸ್ ಠಾಣೆಯಲ್ಲಿ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಪಟ್ಟಿಯಿಂದ ತಮ್ಮ ಹೆಸರು ಕೈಬಿಡುವಂತೆ ಮನವಿ ಸಲ್ಲಿಸಿದ್ದರು. ಆದರೆ, ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆಯು ನ್ಯಾಯಮೂರ್ತಿ ಗಜಾನನ ಭಟ್ ಅವರ ಪೀಠದಲ್ಲಿ ನಡೆಯಿತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಸೂರಜ್ ರೇವಣ್ಣ ಮನವಿಯನ್ನು ತಿರಸ್ಕರಿಸಿ, ಅರ್ಜಿಯನ್ನು ವಜಾಗೊಳಿಸಿದೆ.
ಅರ್ಜಿ ವಜಾಗೊಂಡ ಬೆನ್ನಲ್ಲೇ ಸೂರಜ್ ರೇವಣ್ಣ ವಿರುದ್ಧ ಎಸ್ಐಟಿ ಪೊಲೀಸರು ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಇದು ಅವರಿಗೆ ಸಂಕಷ್ಟ ತಂದೊಡ್ಡುವ ಸಾಧ್ಯತೆಯಿದೆ.
ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಸಹೋದರ ಪ್ರಜ್ವಲ್ ರೇವಣ್ಣ ಜೈಲಿನಲ್ಲಿದ್ದಾರೆ. ಸೂರಜ್ ರೇವಣ್ಣ ಕೂಡ ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಅವರ ತಂದೆ ರೇವಣ್ಣ ಕೂ ಜಾಮೀನಿನ ಮೇಲೆ ಹೊರಗಿದ್ದಾರೆ.

