ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಅಪಘಾತದಲ್ಲಿ ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ರಾಜ್ಯಸರ್ಕಾರದ ವತಿಯಿಂದ ತಲಾ 2 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.