ಅಪರಾಧ ಆರೋಗ್ಯ ಸುದ್ದಿ

ಮಂಡ್ಯ ಭ್ರೂಣ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳ ಬಂಧನ

Share It

ಪಾಂಡವಪುರ: ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಸರಕಾರಿ ಆಸ್ಪತ್ರೆಯಲ್ಲಿಯೇ ಸರಣಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪ್ರಕರಣದಲ್ಲಿ ಈಗಾಗಲೇ ಆರು ಜನರನ್ನು ಬಂಧಿಸಿದ್ದು, ಇದೀಗ ಈ ಇಬ್ಬರ ಬಂಧನದ ನಂತರ ಬಂಧನಕ್ಕೊಳಗಾದವರ ಸಂಖ್ಯೆ ಆರಕ್ಕೇರಿದೆ. ಆರೋಗ್ಯ ಇಲಾಖೆಯ ವಸತಿ ಗೃಹದಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಸುವ ಕೃತ್ಯವನ್ನು ಆರೋಪಿಗಳು ಮಾಡುತ್ತಿದ್ದು, ಮಾಹಿತಿ ಮೇರೆಗೆ ದಾಳಿ ನಡೆಸಿದ ಹಿರಿಯ ಅಧಿಕಾರಿಗಳು ಮತ್ತು ಪೊಲೀಸರಿಗೆ ನಾಲ್ವರು ಆರೋಪಿಗಳು ಸಿಕ್ಕಿಬಿದ್ದಿದ್ದರು. ಇದೀಗ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ಕುಮಾರ್ ಎಂಬಾತ ಚಾಲಕನಾಗಿದ್ದು, ಈಗ ಗರ್ಭಪಾತ ಮಾಡಿಸಿಕೊಳ್ಳುವವರನ್ನು ರಹಸ್ಯ ಸ್ಥಳಗಳಿಗೆ ಸಾಗಿಸುವ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈತ ಈ ಹಿಂದೆಯೂ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಸಿಲುಕಿ, ಬಂಧನಕ್ಕೊಳಗಾಗಿದ್ದ, ಬಿಡುಗಡೆಯಾದ ನಂತರ ಮತ್ತದೇ ಹಳೇ ಕೆಲಸವನ್ನೇ ಮಾಡುತ್ತಿದ್ದು, ವೈದ್ಯರು ಮತ್ತು ದಾದಿಯರಿಗೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದ.

ಮತ್ತೊಬ್ಬ ಆರೋಪಿ ಮೈಸೂರು ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕುಮಾರ್ ಎಂಬಾತ, ಗಾರೆ ಕೆಲಸ ಮಾಡಿಕೊಂಡಿದ್ದು, ಪ್ರಕರಣದಲ್ಲಿ ಗರ್ಭಪಾತ ಮಾಡಿಸಿಕೊಳ್ಳುವವರು ಮತ್ತು ವೈದ್ಯರ ನಡುವೆ ಬಾತ್ಮೀದಾರನಾಗಿ ಕೆಲಸ ಮಾಡುತ್ತಿದ್ದ. ಇದೀಗ ಈ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಒಟ್ಟಾರೆ, ರಾಜ್ಯಾದ್ಯಂತ ಸುದ್ದಿಯಾಗಿದ್ದ ಪ್ರಕರಣವೊಂದರಲ್ಲಿ ಹೆಣ್ಣು ಭ್ರೂಣಗಳನ್ನು ಹೊಟ್ಟೆಯಲ್ಲಿದ್ದಾಗಲೇ ಪತ್ತೆ ಹಚ್ಚಿ ಅದನ್ನು ಗರ್ಭಪಾತ ಮಾಡುವ ಮೂಲಕ ಸಾಯಿಸುವ ಜಾಲವೊಂದು ನಿಷ್ಟಿçಯವಾದಂತಾಗಿದೆ. ಕಾನೂನು ಬಾಃಇರ ಚಟುವಟಿಕೆ ಎಂಬುದು ಗೊತ್ತಿದ್ದು, ಈ ಕೆಲಸ ಮಾಡುತ್ತಿದ್ದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕಿದೆ ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.


Share It

You cannot copy content of this page