ಅಪರಾಧ ಸುದ್ದಿ

Udupi: ಸಮುದ್ರಕ್ಕೆ ಈಜಲು ಹೋದ ಮೂವರು ಸಾವು

Share It

ಉಡುಪಿ: ಸಮುದ್ರಕ್ಕೆ ಈಜಲು ಹೋದ ಮೂವರು ಮೃತಪಟ್ಟಿದ್ದು, ಓರ್ವ ತೀವ್ರವಾಗಿ ಅಸ್ವಸ್ಥಗೊಂಡ ಘಟನೆ ಕುಂದಾಪುರ ತಾಲೂಕಿನ ಗೋಪಾಡಿ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಸಂಭವಿಸಿದೆ.

ಬೆಂಗಳೂರಿನಿಂದ 10 ಮಂದಿ ಯುವಕರ ತಂಡ ಗೋಪಾಡಿಗೆ ಬಂದಿದ್ದು, ಅದರಲ್ಲಿ ಏಳು ಮಂದಿ ಸಮುದ್ರಕ್ಕೆ ಇಳಿದು ನೀರಿನಲ್ಲಿ ಆಡುತ್ತಿದ್ದರು. ಈ ವೇಳೆ ನಾಲ್ವರು ಅಲೆಗಳಿಗೆ ಸಿಲುಕಿ ನೀರು ಪಾಲಾಗಿದ್ದು, ಅವರಲ್ಲಿ ಮೂವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಓರ್ವನನ್ನು ಸ್ಥಳೀಯರು ರಕ್ಷಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಆಗಮಿಸಿದ್ದರು. ಮುಳುಗು ತಜ್ಞ ಈಶ್ವರ ಮಲ್ಪೆ ತಂಡ ಹಾಗೂ ಸ್ಥಳೀಯರಿಂದ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಸ್ಥಳದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

ಪ್ರಾರಂಭದಲ್ಲಿ ಇಬ್ಬರು ಸಾವಿಗೀಡಾಗಿ ಓರ್ವ ಕಣ್ಮರೆಯಾಗಿದ್ದ. ಬಳಿಕ ಆತನ ಮೃತದೇಹ ಸಿಕ್ಕಿತು. ರಕ್ಷಣೆ ಮಾಡಲ್ಪಟ್ಟ ಯುವಕನನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದರು.


Share It

You cannot copy content of this page