ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದ ಆರೋಪದಡಿಯಲ್ಲಿ ಹಣವರ್ಗಾವಣೆಗೆ ಸಹಕರಿಸಿದ ಮೂವರು ಬ್ಯಾಂಕ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರು.ಗಳ ಅಕ್ರವ ನಡೆದಿದೆ ಎಂದು ಆರೋಪಿಸಿ, ನಿಗಮದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಯೂನಿಯನ್ ಬ್ಯಾಂಕ್ ಮೂಲಕ ನಿಗಮದಲ್ಲಿದ್ದ 88 ಕೋಟಿ ರು. ಹಣವನ್ನು ಮತ್ಯಾವುದೋ ಖಾತೆಗೆ ವರ್ಗಾವಣೆ ಮಾಡಲಾಗಿದೆ ಎಂಬ ಆರೋಪವಿದೆ.
ಈ ಆರೋಪದಲ್ಲಿ ಬ್ಯಾಂಕ್ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನಲೆಯಲ್ಲಿ ಯೂನಿಯನ್ ಬ್ಯಾಂಕ್ ಮೂವರು ಅಧಿಕಾರಿಗಳನ್ನು ಅಮಾನತು ಮಾಡಿದೆ.
ಜತೆಗೆ, ಈ ಅವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ, ಆದರೂ, ಬ್ಯಾಂಕ್ ಹೆಸರು ಕೆಡುವಂತಾಗಿದೆ. ಹೀಗಾಗಿ, ಇದರ ಸಮಗ್ರ ತನಿಖೆಯಾಗಬೇಕು ಎಂದು ಯೂನಿಯನ್ ಬ್ಯಾಂಕ್ ಸಿಬಿಐಗೆ ಪತ್ರ ಬೆರೆದಿದೆ. ಒಂದು ವೇಳೆ ಇದೇ ಪತ್ರದ ಆಧಾರದ ಮೇಲೆ ಏನಾದರೂ, ಸಿಬಿಐ ತನಿಖೆ ಕೈಗೊಂಡರೆ, ಒಟ್ಟಾರೆ ಪ್ರಕರಣ ಸಿಬಿಐ ತನಿಖೆಗೆ ಒಳಪಡುತ್ತದೆ.
