ಉಪಯುಕ್ತ

ವಂದೇ ಭಾರತ್ ಸ್ಲೀಪರ್: ಬೆಂಗಳೂರಿನಿಂದ ಪುಣೆಗೆ 13 ಗಂಟೆಗಳಲ್ಲಿ ಪ್ರಯಾಣ, ಮಾರ್ಗ ಮತ್ತು ವೇಳಾಪಟ್ಟಿ

Share It

ಬೆಂಗಳೂರು ಹಾಗೂ ಪುಣೆ ನಡುವಿನ ವಂದೇ ಭಾರತ್​​ ಎಕ್ಸ್​​ಪ್ರಸ್ ರೈಲು ಓಡಾಟದ ಕನಸು ಇಂದು ಪೂರ್ಣಗೊಂಡಿದೆ. ಬೆಂಗಳೂರು ಮತ್ತು ಪುಣೆ ನಡುವಿನ ಸಂಪರ್ಕ ಇನ್ಮುಂದೆ ಮತ್ತಷ್ಟು ವೇಗವಾಗಲಿದೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಏಪ್ರಿಲ್ 5, 2026 ರಂದು ಮಾರ್ಗದಲ್ಲಿ ಸಂಚಾರಕ್ಕೆ ಅಧಿಕೃತವಾಗಿ ಅನುಮೋದನೆ ನೀಡಿದ್ದು, ಇದು ದೇಶದ ಎರಡನೇ ವಂದೇ ಭಾರತ್ ಸ್ಲೀಪರ್ ಸೇವೆಯಾಗಲಿದೆ.

ಪ್ರಸ್ತುತ ಬೆಂಗಳೂರು ಮತ್ತು ಪುಣೆ ನಡುವೆ ಸಂಚರಿಸುವ ಉದ್ಯನ್ ಎಕ್ಸ್‌ಪ್ರೆಸ್ 18 ಗಂಟೆ ಹಾಗೂ ಕೊಯಮತ್ತೂರು ಎಕ್ಸ್‌ಪ್ರೆಸ್ ಸುಮಾರು 19 ಗಂಟೆ ಸಮಯ ತೆಗೆದುಕೊಳ್ಳುತ್ತವೆ. ಆದರೆ, ಹೊಸ ವಂದೇ ಭಾರತ್ ಸ್ಲೀಪರ್ ರೈಲು ಈ ಸಮಯವನ್ನು 13 ಗಂಟೆಗೆ ಇಳಿಸಲಿದೆ. ಇದು ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ (CSMT) ನಿಂದ ಹೊರಟು ಪುಣೆ, ಸೊಲ್ಲಾಪುರ ಮತ್ತು ವಾಡಿ ಮೂಲಕ ಬೆಂಗಳೂರು ತಲುಪಲಿದೆ. ದೌಂಡ್-ವಾಡಿ ಮತ್ತು ವಾಡಿ-ಗುಂತಕಲ್ ನಡುವಿನ ರೈಲ್ವೆ ಹಳಿಗಳನ್ನು ಗಂಟೆಗೆ 130 ಕಿ.ಮೀ ವೇಗದಲ್ಲಿ ಚಲಿಸಲು ಅನುವಾಗುವಂತೆ ಮೇಲ್ದರ್ಜೆಗೇರಿಸಲಾಗಿದೆ. ಇದರಿಂದಾಗಿ ರೈಲು ಅತಿ ವೇಗವಾಗಿ ಗುರಿ ತಲುಪಲು ಸಾಧ್ಯವಾಗಲಿದೆ.


Share It

You cannot copy content of this page