ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ರಾಸಲೀಲೆಯ ವಿಡಿಯೋ ವೈರಲ್ ಆಗಿದ್ದು, ಅಧಿಕಾರಿಗಳ ವಲಯದಲ್ಲಿ ಸಂಚಲನ ಮೂಡಿಸಿದೆ.
ವಿದೇಶದಿಂದ ಚಿನ್ನ ಕಳ್ಳಸಾಗಾಟ ಮಾಡಿದ ಆರೋಪದಲ್ಲಿ ಬಂಧಿತರಾಗಿರುವ ರನ್ಯಾ ರಾವ್ ಅವರ ತಂದೆ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಅವರ ವಿಡಿಯೋ ಇದೀಗ ವೈರಲ್ ಆಗಿದ್ದು, ಸಂಚಲನ ಮೂಡಿಸಿದೆ.
ಇದು ರನ್ಯಾ ರಾವ್ ಪ್ರಕರಣ ಬೆಳಕಿಗೆ ಬರುವ ಮೊದಲು ಅಂದರೆ, ಒಂದು ವರ್ಷದ ಹಿಂದೆ ರೆಕಾರ್ಡ್ ಆಗಿರುವ ವಿಡಿಯೋ ಎಂದು ಹೇಳಲಾಗುತ್ತಿದ್ದು, ಅಧಿಕಾರಿ ತಮ್ಮ ಕಚೇರಿಯಲ್ಲಿಯೇ ಮಹಿಳೆಯೊಂದಿಗೆ ರಾಸಲೀಲೆ ನಡೆಸಿರುವ ವಿಡಿಯೋ ಇದಾಗಿದೆ.
ಬೇರೆ ಬೇರೆ ದಿನಗಳಲ್ಲಿ ಸಮವಸ್ತçದಲ್ಲಿಯೇ ರಾಮಚಂದ್ರರಾವ್ ಮಹಿಳೆಯೊಂದಿಗೆ ಸಲುಗೆಯಿಂದ ನಡೆದುಕೊಂಡು, ಆಕೆಯನ್ನು ಚುಂಬಿಸುವುದು, ತಬ್ಬಿ ಹಿಡಿಯುವುದು ಮಾಡಿದ್ದಾರೆ. ಇದೆಲ್ಲವೂ ಸೀಕ್ರೇಟ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

