ಜು.15 ರಿಂದ ವಿಧಾನ ಮಂಡಲ ಅಧಿವೇಶನ ಆರಂಭ
ಬೆಂಗಳೂರು: ಇದೇ ಜುಲೈ ೧೫ರಿಂದ ಹತ್ತು ದಿನಗಳ ಕಾಲ ರಾಜ್ಯ ವಿಧಾನಮಂಡಲದ ಅಧಿವೇಶನ ಕರೆಯಲು ತೀರ್ಮಾನಿಸಿದ್ದು, ಈ ಕುರಿತು ರಾಜ್ಯಪಾಲರಿಗೆ ಶಿಫಾರಸು ಮಾಡಲಾಗಿದೆ.
ಅಧಿವೇಶನದಲ್ಲಿ ಕಾಂಗ್ರೆಸ್ ಪಾಳೆಯದಲ್ಲಿ ನಡೆಯುತ್ತಿರುವ ಸಿಎಂ, ಡಿಸಿಎಂ ಚರ್ಚೆಯ ವಿಚಾರದ ಜತೆಗೆ, ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ, ಮೂಡಾ ಹಗರಣಗಳನ್ನಿಟ್ಟುಕೊಂಡು ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬೀಳುವ ಸಾಧ್ಯತೆಗಳಿವೆ.


