ಬೆಂಗಳೂರು: ದೇಶಾದ್ಯಂತ ಲೋಕಸಭೆ ಚುನಾವಣೆಗೆ 7 ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಏಪ್ರಿಲ್ 19ರಂದು ನಡೆದಿದ್ದು, 2ನೇ ಹಂತದ ಮತದಾನ ಏಪ್ರಿಲ್ 26ರಂದು ನಡೆದರೆ, 3ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ.
ಏಪ್ರಿಲ್ 26 ರಂದು 2ನೇ ಹಂತದಲ್ಲಿ ಒಟ್ಟು 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆದಿದೆ. ಏಪ್ರಿಲ್ 26ರಂದು ಕರ್ನಾಟಕದ ದಕ್ಷಿಣ ಭಾಗದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನವಾಗಿತ್ತು. ಇದೀಗ 3ನೇ ಹಂತದಲ್ಲಿ 11 ರಾಜ್ಯಗಳ 92 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಹಂತದಲ್ಲಿ ಒಟ್ಟು 1300 ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ.
3ನೇ ಹಂತದಲ್ಲಿ ಗುಜರಾತ್ನ 25, ಕರ್ನಾಟಕದ 14, ಮಹಾರಾಷ್ಟ್ರದ 11, ಮಧ್ಯಪ್ರದೇಶದ 8, ಛತ್ತೀಸ್‌ಗಢದ 7, ಬಿಹಾರದ 5, ಅಸ್ಸಾಂನ 4, ಉತ್ತರ ಪ್ರದೇಶದ 10, ಪಶ್ಚಿಮ ಬಂಗಾಳದ 4, ಗೋವಾದ 2, ದಾದರ್-ನಗರ ಹವೇಲಿಯ 2 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಈಗಾಗಲೇ ಕರ್ನಾಟಕದ 28 ಕ್ಷೇತ್ರಗಳ ಫೈಕಿ 14 ಕ್ಷೇತ್ರಗಳ ಏಪ್ರಿಲ್ 26 ರಂದು ಮತದಾನವಾಗಿದ್ದು, ಮೇ 7 ರಂದು 3ನೇ ಹಂತದ ಮತದಾನಕ್ಕೆ ಚುನಾವಣಾ ಆಯೋಗವು ಸಕಲ ಸಿದ್ದತೆಯನ್ನ ಮಾಡಿಕೊಂಡಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ದಕ್ಷಿಣದ ಜಿಲ್ಲೆಗಳ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆದಿದೆ. ಉಳಿದ 14 ಕ್ಷೇತ್ರಗಳಿಗೆ ಮೇ 7 ರಂದು ಚುನಾವಣೆ ನಡೆಯಲಿದೆ. ಇಂದು ಲೋಕಸಭಾ ಚುನಾವಣೆಗೆ ಮತದಾನ ನಡೆಯಬೇಕಿರುವ ಕ್ಷೇತ್ರಗಳ ಸಂಪೂರ್ಣ ವಿವರ ಇಲ್ಲಿದೆ…
ಚಿಕ್ಕೋಡಿ
ಬೆಳಗಾವಿ
ಬಾಗಲಕೋಟೆ
ಬಿಜಾಪುರ (ಎಸ್‌ಸಿ)
ಗುಲ್ಬರ್ಗಾ (ಎಸ್‌ಸಿ)
ರಾಯಚೂರು (ಎಸ್‌ಟಿ)
ಬೀದರ್
ಕೊಪ್ಪಳ
ಬಳ್ಳಾರಿ (ಎಸ್‌ಟಿ)
ಹಾವೇರಿ
ಧಾರವಾಡ
ಉತ್ತರ ಕನ್ನಡ
ದಾವಣಗೆರೆ
ಶಿವಮೊಗ್ಗ