ಹಿಂದಿ ಮಾತನಾಡುವಂತೆ ಧಮ್ಕಿ ಹಾಕಿದ್ದ ವಾರ್ಡನ್ ವಜಾ
ಬೆಂಗಳೂರು: ಹಿಂದಿಯಲ್ಲೇ ಮಾತನಾಡಬೇಕು ಎಂದು ಒತ್ತಾಯಿಸಿದ್ದ ಎಎಂಸಿ ಹಾಸ್ಟೆಲ್ ವಾರ್ಡನ್ ಸುರೇಶ್ ನನ್ನು ಕಾಲೇಜು ಆಡಳಿತ ಮಂಡಳಿ ಕೆಲಸದಿಂದ ವಜಾಗೊಳಿಸಿದೆ.
ವಾರ್ಡನ್ ಸುರೇಶ್ ಹಿಂದಿಯಲ್ಲಿ ಮಾತನಾಡುವಂತೆ ಧಮ್ಕಿ ಹಾಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಕೆಲಸದಿಂದ ವಜಾಗೊಳಿಸುವಂತೆ ಕಾಲೇಜು ಆಡಳಿತ ಮಂಡಳಿ ಮೇಲೆ ಒತ್ತಡ ಹಾಕಲಾಗಿತ್ತು.
ಕನ್ನಡಪರ ಸಂಘಟನೆಗಳು ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಅವರನ್ನು ವಜಾಗೊಳಿಸುವಂತೆ ಒತ್ತಾಯಿಸಿದ್ದರು. ಈ ಕಾರಣದಿಂದ ಅವರನ್ನು ಕಾಲೇಜನಿಂದಲೇ ವಜಾಗೊಳಿಸಲಾಗಿದೆ. ಅವರ ವಿರುದ್ಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.


