ರಾಹುಲ್ ಗಾಂಧಿ ಹೇಳಿದಂತೆ ನಾವೆಲ್ಲ ಕೇಳ್ತೇವೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಯಾವುದೇ ಗೊಂದಲಗಳಿಲ್ಲ, ನಾವೆಲ್ಲರೂ ರಾಹುಲ್ ಗಾಂಧಿ ಹೇಳಿದಂತೆಯೇ ಕೇಳುತ್ತೇವೆ ಎನ್ನುವ ಮೂಲಕ ಸಿಎಂ ಸ್ಥಾನದ ವಿವಾದಕ್ಕೆ ತೆರೆ ಎಳೆಯುವ ಪ್ರಯತ್ನವನ್ನು ಸಿಎಂ ಸಿದ್ದರಾಮಯ್ಯ ಮಾಡಿದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಹೇಗೆ ಹೇಳುತ್ತೋ ಹಾಗೆ ಕೇಳಲು ನಾವೆಲ್ಲ ರೆಡಿಯಿದ್ದೇವೆ. ನಾನು ಈ ಹಿಂದೆಯೂ ಅನೇಕ ಬಾರಿ ಹೇಳಿದ್ದೇನೆ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲ ಬದ್ಧ. ಆದರೂ, ನೀವು ಅದೇ ಪ್ರಶ್ನೆಯನ್ನು ಮತ್ಯಾಕೆ ಕೇಳುತ್ತೀರಿ ಎಂದು ಪ್ರಶ್ನಿಸಿದರು.
ಹೈಕಮಾಂಡ್ ಸಧ್ಯಕ್ಕೆ ನನಗೆ ಜವಾಬ್ದಾರಿ ವಹಿಸಿದೆ. ನಾನು ಮುಖ್ಯಮಂತಿಯಾಗಿ ಕೆಲಸ ಮಾಡುತ್ತಿದ್ದೇವೆ. ಮುಂದೆಯೂ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದರು.


