ಹುಬ್ಬಳ್ಳಿ: ನಮ್ಮ ಹೈಕಮಾಂಡ್ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ಳುತ್ತೇವೆ ಎನ್ನುವ ಮೂಲಕ ಹೊಸ ವಿವಾದದ ಕಿಡಿ ಹೊತ್ತಿಸಿದ್ದಾರೆ.
ಸುದ್ದಿಗಾರರ ಜತೆಗೆ ಮಾತನಾಡಿರುವ ಅವರು, ಈಗಾಗಲೇ ಸಿಎಂ ಬದಲಾವಣೆ ವಿಚಾರದಲ್ಲಿ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ನಮ್ಮ ಹೈಕಮಾಂಡ್ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ತೀವಿ. ಇದರಲ್ಲಿ ಗೊಂದಲವೇನಿಲ್ಲ ಎಂದು ತಿಳಿಸಿದರು.
ಸಿಎಂ ಸ್ಥಾನದ ಬಗ್ಗೆ ಈಗಾಗಲೇ ನವೆಂಬರ್ ಕ್ರಾಂತಿ ಮುಗಿದು ಹೋಗಿದೆ. ಈಗ ಸಿಎಂ ಖುರ್ಚಿ ಖಾಲಿಯಿಲ್ಲ. ಅದು ೨೦೨೮ರವರೆಗೂ ಖಾಲಿಯಾಗುವುದೂ ಇಲ್ಲ. ಈ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅವರು ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ನಾವು ಒಪ್ಪಿಕೊಳ್ತೇವೆ ಎಂದರು.

