ಕೇರಳದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ

Share It

ಬೆಂಗಳೂರು : ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ.

ವಯನಾಡಿನಲ್ಲಿ ಸಂಭವಿಸಿದ ದುರಂತ ಭೂಕುಸಿತದ ಬೆಳಕಿನಲ್ಲಿ ಕರ್ನಾಟಕವು ಕೇರಳದೊಂದಿಗೆ ಒಗ್ಗಟ್ಟಿನಿಂದ ನಿಲ್ಲಲಿದೆ. ನಾನು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ್ದು ಬೆಂಬಲ ವ್ಯಕ್ತಪಡಿಸುವುದಾಗಿ ತಿಳಿಸಿದ್ದೇನೆ ಎಂದು ಹೇಳಿದರು. ಕರ್ನಾಟಕವು ನೊಂದ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿ ಕೊಡಲಿದೆ. ಒಟ್ಟಾಗಿ ನಾವು ಪುನರ್ ನಿರ್ಮಾಣ ಮಾಡುತ್ತೇವೆ ಮತ್ತು ಭರವಸೆಯನ್ನು ಪುನಃಸ್ಥಾಪಿಸುತ್ತೇವೆ ಎಂದು ಟ್ವೀಟ್ ಮಾಡುವುದರ ಮುಖಾಂತರ ಆತ್ಮವಿಶ್ವಾಸ ವ್ಯೆಕ್ತಪಡಿಸಿದರು.


Share It

You May Have Missed

You cannot copy content of this page