ಉಪಯುಕ್ತ ಫ್ಯಾಷನ್ ಸುದ್ದಿ

ಸೋಷಿಯಲ್ ಮೀಡಿಯಾದಲ್ಲಿ ಮಕ್ಕಳು ಏನ್ ಮಾಡ್ತಾರೆ?

Share It


ಶಿಕ್ಷಕರು-ಪೋಷಕರ ಜತೆಗೆ ಮೇಟಾ ಸಂವಾದ ಕಾರ್ಯಕ್ರಮ
ಬೆಂಗಳೂರು: ಯುವಜನರು ಸಾಮಾಜಿಕ ಜಾಲತಾಣ ಬಳಕೆ ಮಾಡುವಲ್ಲಿ ಇರುವ ಉಪಯೋಗಗಳು, ಸವಾಲುಗಳು ಮತ್ತು ಸಮಸ್ಯೆಗಳ ಕುರಿತು ಶಿಕ್ಷಕರು ಮತ್ತು ಪೋಷಕರ ಜತೆಗೆ ಸಂವಾದ ಕಾರ್ಯಕ್ರಮವನ್ನು ಪ್ರಮುಖ ಸಾಮಾಜಿಕ ಜಾಲತಾಣ ಸಂಸ್ಥೆ ಮೇಟಾ ಆಯೋಜಿಸಿತ್ತು.

ಮೆಟಾ ೧ಎಂ೧ಬಿ ಸಹಭಾಗಿತ್ವದಲ್ಲಿ ನಡೆದ ಟಾಕಿಂಗ್ ಡಿಜಿಟಲ್ ಸುರಕ್ಷಾ ಫಾರ್ ಟೀನ್ಸ್ (ಹದಿಹರೆಯದವರಿಗೆ ಡಿಜಿಟಲ್ ಸುರಕ್ಷಾ) ಕಾರ್ಯಕ್ರಮದಕ್ಕಿ ಆನ್‌ಲೈನ್ ಸುರಕ್ಷತೆಗಳ ಬೆಗೆಗೆಪೋಷಕರಲ್ಲಿ ಜಾಗೃತಿ ಮೂಡಿಸಲು ಮತ್ತು ಆನ್‌ಲೈನ್‌ನಲ್ಲಿ ತೊಡಗಿಸಿಕೊಳ್ಳುವ ಹದಿಹರೆಯದವರ ಯೋಗಕ್ಷೇಮ ಕಾಪಾಡುವ ಅಭ್ಯಾಸಗಳ ಕುರಿತು ಜಾಗೃತಿ ಮೂಡಿಸಲಾಯಿತು.

ನಗರದ ಆಯ್ದ ೧೦-೧೫ ಶಾಲೆಗಳ ಆಯ್ದ ಶಿಕ್ಷಕರು ಮತ್ತು ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಹದಿಹರೆಯದ ಮಕ್ಕಳ ಸಾಮಾಜಿಕ ಮಾಧ್ಯಮ ಬಳಕೆ ಮತ್ತು ಇತರ ಆನ್‌ಲೈನ್ ಟ್ರೆಂಡ್‌ಗಳ ಕುರಿತು ಪೋಷಕರು ಮತ್ತು ಶಿಕ್ಷಕರ ಅಭಿಪ್ರಾಯ ಸಂಗ್ರಹಿಸಲಾಯಿತು. ಡಿಜಿಟಲ್ ಸುರಕ್ಷತಾ ಉಪಕ್ರಮಗಳ ಕುರಿತು ಹೆಚ್ಚು ತಿಳಿದುಕೊಳ್ಳಲು ಮತ್ತು ಅವರ ಹದಿಹರೆಯದ ಮಕ್ಕಳ ಸಾಮಾಜಿಕ ಜಾಲತಾಣಗಳ ಪ್ರಯಾಣದ ಅನುಭವಗಳ ಕುರಿತು ಚರ್ಚಿಸಲು ವೇದಿಕೆ ಕಲ್ಪಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಇನ್‌ಸ್ಟಾಗ್ರಾಮ್ ಭಾರತದ ಸಾರ್ವಜನಿಕ ನೀತಿ ನಿರ್ದೇಶಕಿ ನತಾಶಾ ಜೋಗ್, ನಮ್ಮ ಯುವ ಬಳಕೆದಾರರು ಆನ್‌ಲೈನ್‌ನಲ್ಲಿ ಅರ್ಥಪೂರ್ಣವಾಗಿ ಸಮಯವನ್ನು ಕಳೆಯುವುದರ ಜೊತೆಗೆ ವಿಶೇಷವಾಗಿ ಅವರು ಇಷ್ಟಪಡುವ ಎಲ್ಲಾ ಕೆಲಸಗಳನ್ನು ಮಾಡುತ್ತಲೇ ಸುರಕ್ಷಿತವಾಗಿರುವ ಅಗತ್ಯವನ್ನು ನಾವು ಗಮನಿಸಿದ್ದೇವೆ. ಹೀಗಾಗಿ, ಭಾರತದಾದ್ಯಂತ ಸುರಕ್ಷತೆ ಕುರಿತ ಚರ್ಚೆಗಳನ್ನು ನಡೆಸುವ ಮೂಲಕ ಆನ್‌ಲೈನ್ ಅಭ್ಯಾಸ ನಿರ್ವಹಿಸಲು ಪೋಷಕರನ್ನು ಸಜ್ಜುಗೊಳಿಸುವ ದಾರಿಗಳನ್ನು ಹುಡುಕುತ್ತಿದ್ದೇವೆ ಎಂದರು.

ಬಳಕೆದಾರರ ಸುರಕ್ಷತಾ ಪರಿಸರ ವ್ಯವಸ್ಥೆ ಬಲಪಡಿಸಲು ನಡೆಯುತ್ತಿರುವ ಪ್ರಯತ್ನವಾಗಿ ಮೆಟಾ ಕಳೆದ ವರ್ಷ ‘ಡಿಜಿಟಲ್ ಸುರಕ್ಷಾ ಶೃಂಗಸಭೆ’ ನಡೆಸಿತ್ತು. ಆ ಮೂಲಕ ಯುವಜನತೆ ಮತ್ತು ಮಹಿಳೆಯರಿಗೆ ಸುರಕ್ಷಿತ ಮತ್ತು ಸಮತೋಲಿತ ಆನ್‌ಲೈನ್ ಅನುಭವ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಇದರ ಜೊತೆಗೆ ಮೆಟಾ, ಆನ್‌ಲೈನ್ ಸುರಕ್ಷತೆ ಮತ್ತು ಡಿಜಿಟಲ್ ಪೌರತ್ವ ಕುರಿತು ಮಾಹಿತಿ, ಜ್ಞಾನ ಮತ್ತು ಶಿಕ್ಷಣದ ಬಗ್ಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಸಬಲೀಕರಣಗೊಳಿಸಲು ಕರ್ನಾಟಕ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ (ಐಟಿಬಿಟಿ) ಇಲಾಖೆಯೊಂದಿಗೆ ಎರಡು ವರ್ಷಗಳ ಪಾಲುದಾರಿಕೆಯನ್ನು ಪ್ರಕಟಿಸಿದೆ.


Share It

You cannot copy content of this page