ಬೆಂಗಳೂರು: ಮಹಿಳೆಯರಿಗೆ ಒಳ್ಳೆಯದಾಗಲಿ ಎಂದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ನಮ್ಮ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದರೆ ಏನರ್ಥ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ಗ್ಯಾರಂಟಿ ಕುರಿತು,
ಇದು ರಾಜ್ಯದ ಮಹಿಳೆಯರ ಸ್ವಾಭಿಮಾನದ ಪ್ರಶ್ನೆ. ಕುಮಾರಸ್ವಾಮಿ ಅವರ ಹೇಳಿಕೆ ರಾಜ್ಯಕ್ಕೆ ಕಪ್ಪುಚುಕ್ಕೆ. ಈ ಹೇಳಿಕೆಯ ವಿರುದ್ಧ ಪಕ್ಷ ಬೇಧ ಮರೆತು ಎಲ್ಲಾ ಮಹಿಳಾ ಸಂಘಟನೆಗಳು ಹೋರಾಟ ಮಾಡಬೇಕು. ಹಗುರವಾಗಿ ಮಾತನಾಡುವುದರ ಬಗ್ಗೆ ಪ್ರತಿರೋಧ ಒಡ್ಡಬೇಕು. ಎನ್ ಡಿಎ ಮೈತ್ರಿಗೆ ಬುದ್ಧಿ ಕಲಿಸಬೇಕು ಎಂದರು.
ಕಾಂಗ್ರೆಸ್ ಮಹಿಳಾಮಣಿಗಳಿಗೆ ದುಃಖವಾಗಿದ್ದರೆ ವಿಷಾಧ ವ್ಯಕ್ತಪಡಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ ಎಂದಾಗ ಈ ವಿಚಾರದಲ್ಲಿ ಕುಮಾರಸ್ವಾಮಿ ಅವರ ಕ್ಷಮಾಪಣೆ, ವಿಷಾಧ ಯಾವುದೂ ಬೇಕಾಗಿಲ್ಲ. ಕೊಲೆ ಮಾಡಿ, ಹಲ್ಲೆ ನಡೆಸಿ ಕ್ಷಮಾಪಣೆ ಕೇಳಿದರೆ ಆಗುತ್ತದೆಯೇ? ಬಿಜೆಪಿ ಮತ್ತು ಜೆಡಿಎಸ್ ಮಹಿಳಾ ಕಾರ್ಯಕರ್ತರಿಗೆ ಗ್ಯಾರಂಟಿ ಯೋಜನೆ ಲಾಭ ತಿರಸ್ಕಿರಿಸಲು ಕರೆ ನೀಡಲಿ. ಅವರಿಂದ ಕೇವಲ ಐದು ಜನರ ಕೈಯಲ್ಲಿ ಗ್ಯಾರಂಟಿಗಳನ್ನು ಹಿಂಪಡೆಯುವಂತೆ ಮಾಡಿಸಲು ಆಗುವುದಿಲ್ಲ ಎಂದರು