ನವದೆಹಲಿ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ 2024 ರ ಕೇಂದ್ರ ಬಜೆಟ್ ಮಂಡನೆ ಮಾಡಿದ್ದಾರೆ. ತೆರಿಗೆ ಪಾವತಿಸುವ ಭಾರತೀಯರು
ಯಾವ ವಸ್ತುಗಳು ಅಗ್ಗ ಮತ್ತು ಯಾವ ವಸ್ತುಗಳು ದುಬಾರಿ ಆಗಲಿವೆ ಎಂಬುದರ ಬಗ್ಗೆ ಕುತೂಹಲ ವ್ಯಕ್ತಪಡಿಸಿದ್ದರು. ಫೆಬ್ರವರಿ 1 ರಂದು ಮಂಡಿಸಿದ ಮಧ್ಯಂತರ ಬಜೆಟ್‌ನಲ್ಲಿ ಸೀತಾರಾಮನ್ ಯಾವುದೇ ಪ್ರಮುಖ ಬದಲಾವಣೆಗಳನ್ನು ಘೋಷಿಸಲಿಲ್ಲ.
ಹಿಂದಿನ ವರ್ಷದ ಬಜೆಟ್ ಅಧಿವೇಶನದಲ್ಲಿ, ಟಿವಿ, ಸ್ಮಾರ್ಟ್‌ಫೋನ್‌ಗಳು, ಸೀಗಡಿ ಫೀಡ್ ಮೊದಲಾದ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಲಾಯಿತು. ಸಿಗರೇಟ್, ವಿಮಾನ ಪ್ರಯಾಣ ಮತ್ತು ಜವಳಿಗಳ ವೆಚ್ಚವನ್ನು ಹೆಚ್ಚಿಸಲಾಗಿತ್ತು.
ಈ ಬಾರಿ ಬಜೆಟ್ ನಲ್ಲಿ ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಅಗ್ಗವಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ. 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇ. 6.4 ರಷ್ಟು ಕಡಿಮೆ ಮಾಡಲಾಗುವುದು. ಅದೇ ವೇಳೆ ಚಿನ್ನ, ಬೆಳ್ಳಿ ಮೇಲಿನ ಕಸ್ಟಮ್ಸ್ ತೆರಿಗೆ ಶೇ 6ರಷ್ಟು ಕಡಿತ ಮಾಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಮೊಬೈಲ್ ಫೋನ್ ಹಾಗೂ ಮೊಬೈಲ್ ಚಾರ್ಜರ್ ಗಳ ಮೇಲಿನ ತೆರಿಗೆ ಇಳಿಕೆ ಬಗ್ಗೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ.