ಬೆಂಗಳೂರು: ಬ್ರೂಕ್ ಫೀಲ್ಡ್ನಲ್ಲಿರುವ ಬೇಬಿಕೇರ್ನಲ್ಲಿ ಮಕ್ಕಳ ಮೇಲೆ ಆರೈಕೆದಾರರೇ ದೌರ್ಜನ್ಯವೆಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳಾ ಸಿಬ್ಬಂದಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಬಂಧಿತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೇಬಿಕೇರ್ಗೆ ಬರುತ್ತಿದ್ದ ಮಕ್ಕಳು ಗಲಾಟೆ ಮಾಡುತ್ತಿದ್ದವು, ಅಳುತ್ತಿದ್ದರು ಅನ್ನೋ ಕಾರಣಕ್ಕೆ ಕೇರ್ ಟೆಕರ್ಸ್ಗಳು ಮಕ್ಕಳ ಜೊತೆ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ಸಾಕ್ಷಿ ಸಮೇತವಾಗಿ ಮಕ್ಕಳ ಸಹಾಯವಾಣಿ ಅಧಿಕಾರಿಗಳ ಮೂಲಕ ಪೊಲೀಸರಿಗೆ ದೂರು ನೀಡಲಾಗಿತ್ತು.
ಮಕ್ಕಳ ಮೇಲೆ ಹಲ್ಲೆ ಮಾಡಿ, ಫ್ರಂಟ್ ಲೋಡ್ ವಾಷಿಂಗ್ ಮೆಷಿನ್ನಲ್ಲಿ ತುಂಬಿ, ಬಾತ್ ರೂಂಗಳಲ್ಲಿ ಕೂಡಿ ಹಾಕಿ ನೀರು ಸುರಿದು ಮಕ್ಕಳಿಗೆ ಭಯಪಡಿಸುವ ಕೆಲಸ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು. ಕೇರ್ ಟೇರ್ಕಸ್ಗಳಾದ ಮಂಜುಳಾ, ವಿಜಯಲಕ್ಷ್ಮೀ, ಭವಾನಿ, ಸಿಂಧು, ಬಿಂದು ಸೇರಿ ಐವರ ಮೇಲೆ ಬಿಎನ್ಎಸ್ ಮತ್ತು ಬಾಲಾಪರಾಧಿ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು.

