ಮಹಿಳೆ ವಿವಸ್ತ್ರ ಪ್ರಕರಣ:ದೋಷಾರೋಪ ಪಟ್ಟಿ ಸಲ್ಲಿಕೆ

Hicourt
Share It

ಬೆಂಗಳೂರು: ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಆರೋಪಿಗಳ ಮೇಲೆ ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದೆ ಎಂದು ಸರಕಾರ ಹೈಕೋಟರ್್ಗೆ ತಿಳಿಸಿದೆ.

ಹೈಕೋಟರ್್ನಲ್ಲಿ ದಾಖಲಾಗಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅಜರ್ಿಗೆ ಸಂಬಂಧ ನಡೆದ ವಿಚಾರಣೆ ಸಂದರ್ಭದಲ್ಲಿ ಸರಕಾರ ನ್ಯಾಯಾಲಯಕ್ಕೆ ಈ ಮಾಹಿತಿ ನೀಡಿದೆ. ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಥಳಿಸಿದ ಸಂಬಂಧ ವಿಡಿಯೋ ವೈರಲ್ ಆಗಿತ್ತು. ಹೈಕೋಟರ್್ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡು, ಸಊಕ್ತ ಕ್ರಮ ತೆಗೆದುಕೊಳ್ಳುವಂತೆ ಸರಕಾರಕ್ಕೆ ನಿದರ್ೇಶನವನ್ನೂ ನೀಡಿತ್ತು.

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ 12 ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣಾ ನ್ಯಾಯಾಲಯಕ್ಕೆ ಈಗಾಗಲೇ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋಟರ್್ನಲ್ಲಿ ಈ ವಿಚಾರದಲ್ಲಿ ಮುಖ್ಯ ನ್ಯಾಯಮೂತರ್ಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂತರ್ಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ ರಾಜ್ಯ ಸಕರ್ಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಪ್ರಕರಣದ ಎಲ್ಲ ಆರೋಪಿಗಳನ್ನು ಬಂಧಿಸಲಾಗಿದೆ. ಈಗಾಗಲೇ ತನಿಖೆ ಪೂರ್ಣಗೊಳಿಸಿ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಹ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಜತೆಗೆ ಸರಕಾರದಿಂದ ಸಂತ್ರಸ್ತೆಗೆ ಎರಡು ಎಕರೆ ಜಮೀನು ಹಾಗೂ 5 ಲಕ್ಷ ರೂ. ಪರಿಹಾರ ಕಲ್ಪಿಸಲಾಗಿದೆ. ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಲು ವಿಚಾರಣಾ ನ್ಯಾಯಾಲಯಕ್ಕೆ ಕಾಲಮಿತಿ ನಿಗದಿಪಡಿಸಬೇಕು. ಇದು ಅತಿ ಅಪರೂಪದ ಪ್ರಕರಣ. ಇಂಥ ಘಟನೆಗಳು ಮರುಕಳಿಸದಂತೆ ಎಚ್ಚರಿಕೆಯ ಸಂದೇಶ ರವಾನಿಸಬೇಕಿದೆ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿಕೊಂಡಿದ್ದಾರೆ. ಜತೆಗೆ ಸಂತ್ರಸ್ತೆ ಆರೋಗ್ಯ ಸ್ಥಿತಿಗತಿ ಮೇಲೆ ನಿಗಾ ವಹಿಸಲಾಗುವುದು.

ಆಕೆಯ ಮಾನಸಿಕ ಆರೋಗ್ಯ ಪರಿಗಣಿಸಿ ಒಂದು ವರ್ಷದ ಅವಧಿಯವರೆಗೆ ಎರಡು ತಿಂಗಳಿಗೊಮ್ಮೆ ತಜ್ಞರು ಸಮಾಲೋಚನೆಗೆ ಒಳಪಡಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದರು. ಈ ವೇಳೆ ನ್ಯಾಯಪೀಠ, ಪ್ರಕರಣದ ವರದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸಲ್ಲಿಸುವಂತೆ ಸಕರ್ಾರಕ್ಕೆ ಸೂಚಿಸಿತು. ಆದೇಶವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಪೀಠ ತಿಳಿಸಿತು.


Share It

You cannot copy content of this page