ಅಪರಾಧ ಸುದ್ದಿ

Yadagiri: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಭೀಕರ ಹಲ್ಲೆ: ಹತ್ತು ಜನರಿಗೆ ಗಂಭೀರ ಗಾಯ 

Share It

ಯಾದಗಿರಿ: ದೇವಸ್ಥಾನ ಪ್ರವೇಶ ಸಂಬಂಧ ದಲಿತರ ಮೇಲೆ ಸವರ್ಣೀಯರು ದಾಳಿ ನಡೆಸಿದ್ದು, ಹತ್ತಕ್ಕೂ ಹೆಚ್ಚು ಜನರು ಗಂಬಿರವಾಗಿ ಗಾಯಗೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಗುರುಸುಣಗಿ ಗ್ರಾಮದಲ್ಲಿ ನಡೆದಿದೆ. 

ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದ್ದು, ಪಕ್ಕದ ಗ್ರಾಮವಾದ ಚಾಮನಹಳ್ಳಿಯಿಂದ ದಲಿತ ಮಾದಿಗ ಸಮುದಾಯಕ್ಕೆ ಸೇರಿದ ಗುಂಪೊಂದು ದೇವಸ್ಥಾನಕ್ಕೆ ಆಗಮಿಸಿತ್ತು ಎನ್ನಲಾಗಿದೆ. ಈ ವೇಳೆ ಗ್ರಾಮದ ಕೆಲವು ಯುವಕರ ಗುಂಪು ಅವರ ಮೇಲೆ ದಾಳಿ ನಡೆಸಿ ಜಾತಿನಿಂದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ. 

ಗ್ರಾಮದ ಜನರು ಬಾಡಿಗೆ ಕಾಲಿಗಳಿಂದ ಥಳಿಸಿ ಹತ್ತು ಜನರನ್ನು ಗಾಯಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತರ ದೂರಿನ ಆಧಾರದಲ್ಲಿ ಹದಿನಾಲ್ಕು ಜನರ ವಿರುದ್ಧ ಪ್ರಕರಣ ದಾಖಲಿಸಿದ್ದು, ಇಬ್ಬರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 


Share It

You cannot copy content of this page