ಯಾದಗಿರಿ: ಶಾಲೆಗೆ ರಜೆಯಿದ್ದಿದ್ದರಿಂದ ತೋಟದಲ್ಲಿ ಆಟವಾಡಲು ಹೋಗಿದ್ದ ನಾಲ್ವರು ಮಕ್ಕಳು ಕೃಷಿಹೊಂಡದಲ್ಲಿ ಬಿದ್ದು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯ ಕೆಂಭಾವಿ ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತ ಮಕ್ಕಳೆನ್ನು ಶರತ್(7) ಹನುಮೇಶ್(6)
ಕಿರಣ್(7) ಹಾಗೂ ಬಸಮ್ಮ(11) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.
ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕಾಗಮಿಸಿದ್ದು, ಶವಗಳನ್ನು ಹೊರತೆಗೆದು ಶವಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕಳುಹಿಸಿದ್ದಾರೆ.

