ಮಂಗಳೂರು: ಯತೀಂದ್ರರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ ಪ್ರತಿಕ್ರಿಯಿಸಲು ಇಷ್ಟವಿಲ್ಲ. ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಐದು ವರ್ಷವೂ ಸಿದ್ದರಾಮಯ್ಯನವರೇ ಸಿಎಂ ಆಗಿರುತ್ತಾರೆ, ನಾಯಕತ್ವ ಬದಲಾವಣೆ ಮಾಡಲ್ಲ ಎಂದು ಹೈಕಮಾಂಡ್ ಸಿಗ್ನಲ್ ಕೊಟ್ಟಿದೆ ಎಂಬ ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಪ್ರತಿಕ್ರಿಯಿಸಿದರು.
ಯತೀಂದ್ರರ ಈ ಹೇಳಿಕೆಯನ್ನು ಗೌರವದಿಂದ ಸ್ವೀಕರಿಸುತ್ತೇನೆ. ಈ ಬಗ್ಗೆ ಏನು ಪ್ರತಿಕ್ರಿಯಿಸಬೇಕೋ ಅದನ್ನು ದೆಹಲಿಯಲ್ಲಿ ಪ್ರತಿಕ್ರಿಯಿಸುತ್ತೇನೆ ಎಂದು ಮಾರ್ಮಿಕವಾಗಿ ನುಡಿದರು.

