ರಾಜಕೀಯ ಸುದ್ದಿ

ಯಡಿಯೂರಪ್ಪನವರ ಆಪ್ತ ಕಾ.ಪು.ಸಿದ್ಧಲಿಂಗಸ್ವಾಮಿ ನಿಧನ!

Share It

ಮೈಸೂರು : ಬಿಜೆಪಿ ಹಿರಿಯ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ(56) ಅವರು ವಿಧಿವಶರಾಗಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತ ಸಹಾಯಕರಾಗಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾ.ಪು ಸಿದ್ದಲಿಂಗಸ್ವಾಮಿ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಿಸದೆ ಬಿಜೆಪಿ ಮುಖಂಡ ಕಾ.ಪು.ಸಿದ್ದಲಿಂಗಸ್ವಾಮಿ ನಿಧನರಾಗಿದ್ದಾರೆ. 2013ರಲ್ಲಿ ವರುಣದಿಂದ KJP ಅಭ್ಯರ್ಥಿಯಾಗಿದ್ದ ಕಾ.ಪು.ಸಿದ್ದಲಿಂಗಸ್ವಾಮಿ ವರುಣ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿದ್ದರು. ಕಾ.ಪು.ಸಿದ್ದಲಿಂಗಸ್ವಾಮಿ ಅಂತ್ಯಕ್ರಿಯೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕಾರ್ಯ ಗ್ರಾಮದಲ್ಲಿ ನಡೆಯಲಿದೆ. ಲಿಂಗಾಯತ ವಿಧಿವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ.

ಭಾನುವಾರ ಅಷ್ಟೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಕಾಪು ಅವರ ಆರೋಗ್ಯ ವಿಚಾರಿಸಿದ್ದರು. ನಿನ್ನೆಯಷ್ಟೇ ತುಮಕೂರು ನೂತನ ಸಂಸದ ವಿ ಸೋಮಣ್ಣ ಅವರು ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ವರುಣ ಕ್ಷೇತ್ರದಲ್ಲಿ ಸೋಮಣ್ಣ ಪರ ಕಾಪು ಅವರು ಕೆಲಸ ಮಾಡಿದ್ದರು.

2013ರಲ್ಲಿ ವರುಣದಲ್ಲಿ ಕಾಪು ಸಿದ್ದಲಿಂಗಸ್ವಾಮಿ ಅವರು ಕೆಜೆಪಿ ಅಭ್ಯರ್ಥಿಯಾಗಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಕೆಲವೇ ಸಾವಿರ ಮತಗಳ ಅಂತರದಿಂದ ಸಿದ್ದರಾಮಯ್ಯ ಅವರ ವಿರುದ್ಧ ಸೋಲುಂಡಿದ್ದರು. ವರುಣ ಕ್ಷೇತ್ರದ ಬಿಜೆಪಿಯಲ್ಲಿ ಹಿಡಿತ ಹೊಂದಿದ್ದ ಸಿದ್ದಲಿಂಗಸ್ವಾಮಿ ಅವರು ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿದ್ದರು. ಕಾಪುಸಿ ಕರ್ನಾಟಕ ಪ್ರವಾಸೋಧ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.


Share It

You cannot copy content of this page