ಉಪಯುಕ್ತ ಸುದ್ದಿ

ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಇಂದು ಮಳೆಯ ಯೆಲ್ಲೋ ಅಲರ್ಟ್

Share It

‌ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಿಗೆ ಆರೆಂಜ್​, ಇನ್ನೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯಪುರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ.

ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ. ದಾವಣಗೆರೆ, ರೋಣ, ಆಲಮಟ್ಟಿ, ಹಾವೇರಿ, ಹುಬ್ಬಳ್ಳಿ, ಸವಣೂರು, ಔರಾದ್, ಯಲಬುರ್ಗಾ, ದೇವರಹಿಪ್ಪರಗಿ, ನಾರಾಯಣಪುರ, ಬೀದರ್, ಶೋರಾಪುರ್, ಲಕ್ಷ್ಮೇಶ್ವರ, ಕಮಲಾಪುರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ. ಬೆಂಗಳೂರಿನಲ್ಲಿ ಬುಧವಾರ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ.


Share It

You cannot copy content of this page