ಹುಬ್ಬಳ್ಳಿ: ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನೊಬ್ಬನಿಗೆ ಸೂಕ್ತ ಸಂದರ್ಭದಲ್ಲಿ ಚಿಕಿತ್ಸೆ ನೀಡದೆ ನಿರ್ಲಕ್ಷö್ಯ ತೋರಿದ ಪರಿಣಾಮ ಯುವಕನೊಬ್ಬ ಮೃತಪಟ್ಟಿರುವ ಆರೋಪ ಕೇಳಿಬಂದಿದೆ.
ಪ್ರಕಾಶ್ ಎಂಬ ವ್ಯಕ್ತಿಗೆ ಅಪಘಾತದಲ್ಲಿ ಗಂಭೀರವಾಗಿ ಗಾಯವಾಗಿತ್ತು. ಆತನನ್ನು ಪೋಷಕರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲು ಬಂದಿದ್ದರು. ಆದರೆ, ಅಲ್ಲಿನ ಸಿಬ್ಬಂದಿ ಗಂಭೀರ ಸ್ಥಿತಿಯಿದ್ದರೂ, ಬೆಡ್ ಕೊರತೆಯ ನೆಪವೊಡ್ಡಿ ಆತನನ್ನು ಆಸ್ಪತ್ರೆಗೆ ಸೇರಿಸಿಕೊಳ್ಳಲು ನಿರಾಕರಿಸದರು ಎನ್ನಲಾಗಿದೆ.
ಅನಿವಾರ್ಯವಾಗಿ ಪೋಷಕರು ಆತನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಅಷ್ಟರಲ್ಲಿ ಆ ವ್ಯಕ್ತಿಯ ಬ್ರೆöÊನ್ ಡೆಡ್ ಆಗಿದೆ ಎಂದು ಕಂಡುಬAದಿದೆ. ಹೀಗಾಗಿ, ಯುವಕ ಪ್ರಕಾಶ್ ಮೃತಪಟ್ಟಿದ್ದು, ಕಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷö್ಯದಿಂದಲೇ ತಮ್ಮ ಮಗನ ಸಆವಾಗಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೋಷಕರು ಮತ್ತು ಸಂಬAಧಿಕರು ಕಿಮ್ಸ್ ಆವರಣದಲ್ಲಿ ಸೇರಿದ್ದು, ವೈದ್ಯರ ವಿರುದ್ಧ ಆಕ್ರೋಶ ವ್ತಕ್ತಪಡಿಸುತ್ತಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ನಡುವೆ ಸ್ಥಳಕ್ಕೆ ಪೊಲೀಸರು ಆಗಮಿಸಿ, ಪೋಷಕರ ಮನವೊಲಿಸುವ ಪ್ರಯತ್ನ ನಡೆಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

