ಬೆಂಗಳೂರು: ಮನೆಯ ಮುಂದೆ ಬಂದು ಕೆಮ್ಮಿದ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿ, ಆತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.
ಮೃತ ಯುವಕನನ್ನು ವಿನೋದ್ ಎಂದು ಹೇಳಲಾಗಿದ್ದು, ಈತ ಬಿಡದಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಈತ ಕಳೆದ ನಾಲ್ಕು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ. ಚಿಕಿತೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂರು ದಿನಗಳ ಹಿಂದೆ ಮನೆಯ ಮುಂದೆ ಬಂದು ಕೆಮ್ಮಿದ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ಪರಾರಿಯಾಗಿದ್ದರು. ಆತನನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಆಸ್ಪತ್ರೆಯ ಬಳಿ ಮೃತ ವಿನೋದ್ ಕುಟುಂಬಸ್ಥರ ಆಕ್ರಂಧನ ಮುಗಿಲುಮುಟ್ಟಿದೆ.

