ಬೆಂಗಳೂರು: ಕಬ್ಬು ಬೆಳೆಗಾರರದ್ದು ರಾಷ್ಟ್ರೀಯ ಸಮಸ್ಯೆ. ಅವರ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ನಮ್ಮ ಕೈಲಾದ ಸಹಾಯವನ್ನು ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.
ನಗರದ ಜ್ಞಾನ ಜ್ಯೋತಿ ಆಡಿಟೋರಿಯಂ ನಲ್ಲಿ ಶನಿವಾರ ಸಿಎಂ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.
‘ಇಂದು ಬೆಳಗಾವಿ ಹೋಗುತ್ತಿದ್ದೇನೆ. ಪ್ರತಿಭಟನೆ ಮಾಡುತ್ತಿರುವ ಕಬ್ಬು ಬೆಳೆಗಾರರೊಂದಿಗೆ ಮಾತನಾಡುತ್ತೇನೆ. ಅವರ ಸಮಸ್ಯೆಗಳನ್ನು ಆಲಿಸುತ್ತೇನೆ. ಅವರ ಅವರ ಸ್ಥಿತಿಗತಿಗಳನ್ನು ನಾವು ಅರ್ಥ ಮಾಡಿಕೊಂಡಿದ್ದೇವೆ’ ಎಂದರು.
ಮೈಸೂರಲ್ಲಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರ ಬಗ್ಗೆ ಪ್ರಶ್ನಿಸಿದಾಗ ಸಿಎಂ, ‘ಅವರನ್ನು ಭೇಟಿ ಮಾಡಿದ್ದು ಸತ್ಯ. ಸಿದ್ದರಾಮಯ್ಯನವರು ನಮ್ಮ ನಾಯಕರು. ಅವರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುವುದು ನನ್ನ ಕರ್ತವ್ಯ, ಜವಾಬ್ದಾರಿ’ ಎಂದು ಹೇಳಿದರು.
